

InterviewSolution
1. |
3.ಕವಿ ಸಿದ್ಧಲಿಂಗಯ್ಯನವರ ಪ್ರತಿಮೆಯ ಅನಾವರಣ ಸಮಾರಂಭದ ವರದಿಯನ್ನು ತಯಾರಿಸಿ |
Answer» ಕವಿ ಸಿದ್ಧಲಿಂಗಯ್ಯನವರು ಬಡ ಕುಟುಂಬವೊಂದರಲ್ಲಿ ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ 1954 ರ ಫೆಬ್ರವರಿ 3 ರಂದು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ ಜನಿಸಿದರು.ಮಾಗಡಿಯ ಹೊಸಹಳ್ಳಿಯ ಬಿಸಿಲಮ್ಮನ ಗುಡಿಯಲ್ಲಿ ಅಕ್ಷರಾಭ್ಯಾಸ ಪ್ರಾರಂಭಿಸಿದ ಸಿದ್ಧಲಿಂಗಯ್ಯನವರು 1974ರ ವರ್ಷದಲ್ಲಿ ಬೆಂಗಳೂರಿನ ಸರಕಾರಿ ಕಲಾಕಾಲೇಜಿನಿಂದ ಬಿ.ಎ. ಆನರ್ಸ್ (ಐಚ್ಛಿಕ ಕನ್ನಡ) ಪದವಿಯನ್ನು ಪಡೆದರಲ್ಲದೆ. 1976ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪ್ರೊ. ಡಿ.ಎಲ್. ನರಸಿಂಹಾಚಾರ್ಯರ ಸ್ವರ್ಣಪದಕದೊಂದಿಗೆ ಪ್ರಥಮ ಶ್ರೇಣಿಯಲ್ಲಿ ಎಂ.ಎ. ಪದವಿಯನ್ನೂ, ಪ್ರೊ. ಜಿ.ಎಸ್. ಶಿವರುದ್ರಪ್ಪನವರ ಮಾರ್ಗದರ್ಶನದಲ್ಲಿ ‘ಗ್ರಾಮದೇವತೆಗಳು’ ಎಂಬ ಪ್ರೌಢ ಪ್ರಬಂಧವನ್ನು ಮಂಡಿಸಿ 1989ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿಯನ್ನು ಗಳಿಸಿದವರಾಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಸಿದ್ಧಲಿಂಗಯ್ಯನವರು, ಪ್ರಾಧ್ಯಾಪಕರಾಗಿ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿನ ಅಸಮಾನತೆಗಳ ಬಗ್ಗೆ ತಮ್ಮೊಳಗೆ ಮೊಳೆಯುತ್ತಿದ್ದ ಸಿಟ್ಟು, ಆಕ್ರೋಶಗಳನ್ನೂ ವ್ಯಕ್ತಿಪಡಿಸಲು ಸಿದ್ಧಲಿಂಗಯ್ಯನವರು ಆಯ್ದುಕೊಂಡದ್ದು ಕಾವ್ಯ ಮಾಧ್ಯಮ. ಹೀಗೆ ಅವರು ಬರೆದ ಹಲವಾರು ಕವನಗಳ ಸಂಕಲನ ‘ಹೊಲೆಮಾದಿಗರ ಹಾಡು’ 1975ರಲ್ಲಿ ಪ್ರಕಟಗೊಂಡಿತು. ಮುಂದೆ ಅವರ ‘ಸಾವಿರಾರು ನದಿಗಳು’, ‘ಕಪ್ಪುಕಾಡಿನ ಹಾಡು’, ‘ಮೆರವಣಿಗೆ’, ‘ನನ್ನ ಜನಗಳು ಮತ್ತು ಇತರ ಕವಿತೆಗಳು’, ‘ಆಯ್ದ ಕವನಗಳು’ ಮುಂತಾದ ಕವನ ಸಂಕಲನಗಳು ಪ್ರಕಟಗೊಂಡಿವೆ.hi i am from karnataka i can HELP you in KANNADA sari NA |
|