| 1. |
K S narasimha essay in Kannada |
|
Answer» PLEASE BRAINLEIST my answer ಕೆ.ಎಸ್.ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆ ಯ ಕರ್ತೃ.[೧](ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ. ಇದು ಮನೆ ಮನೆಯ ಮಾತಾಗಿ, ಕಾವ್ಯವಾಗಿ, ಹಾಡಾಗಿ ಹರಿದಿದೆ. ಇದುವರೆವಿಗೂ ಇಪ್ಪತ್ತೈದಕ್ಕೂ ಹೆಚ್ಚು ಬಾರಿ ಮುದ್ರಣ ಭಾಗ್ಯ ಪಡೆದಿದೆ. ಕನ್ನಡದ ಕೆಲವೇ ಕೃತಿಗಳಿಗೆ ಇಂಥ ಮರು ಮುದ್ರಣದ ಭಾಗ್ಯ- ಆಧುನಿಕ ಕನ್ನಡ ಕಾವ್ಯ ಹಲವು ರೂಪಗಳನ್ನು ಪಡೆಯುತ್ತಾ ಬಂದಿದೆ. ಹಲವು ಸಾಹಿತ್ಯ ಚಳುವಳಿಗಳು ಬಂದುಹೋಗಿವೆ. ಕೆಎಸ್‌ನ ಎಲ್ಲ ಕಾಲಕ್ಕೂ ಸಲ್ಲುವ ಜನಪ್ರೀತಿಯ ಕಾವ್ಯ ಕೃಷಿಗೆ ದೊಡ್ಡ ಹೆಸರು. ಕವಿ ವಿಮರ್ಶಕ ಡಾ. ಎಚ್. ಎಸ್. ವೆಂಕಟೇಶಮೂರ್ತಿ ಅವರು ಕೆಎಸ್‌ನ ಬಗ್ಗೆ ಬರೆಯುತ್ತ ``ನವೋದಯದ ಕಾವ್ಯ ಸಂದರ್ಭದಲ್ಲಿ ಹೆಸರು ಮಾಡಿದ್ದ ಈ ಕವಿ ತಮ್ಮ ಸುಕುಮಾರ ಜಗತ್ತಿನಿಂದ, ನಿಷ್ಠುರವಾದ ಬದುಕಿನ ಸಂದರ್ಭಕ್ಕೆ ಹೊರಳಿದ್ದು `ಶಿಲಾಲತೆ'ಯಲ್ಲಿ. ಆದ್ದರಿಂದ ಸಂಗ್ರಹಕ್ಕೆ ಒಂದು ಐತಿಹಾಸಿಕ ಮಹತ್ವವಿದೆ" -ಎಂದು ದಾಖಲಿಸಿದ್ದಾರೆ. ಜೊತೆಗೆ ಮೈಸೂರು ಮಲ್ಲಿಗೆಯ ಕವಿತೆಯ ಭಾಷೆ, ವಸ್ತು, ಲಯಗಳ ಮೇಲೆ ಇಂಗ್ಲಿಷ್ ಗೀತೆಗಳ ಪ್ರಭಾವವನ್ನು ಗುರುತಿಸಬಹುದು ಎಂದು ಡಾ. ಹೆಚ್.ಎಸ್.ವಿ. ಗುರ್ತಿಸಿದ್ದಾರೆ. |
|