InterviewSolution
| 1. |
ಸಂಸ್ಕೃತ ಗುಣಿತಾಕ್ಷರ ಬಿಡಿಸಿ ಬರೆಯಿರಿ |
|
Answer» ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳು ಕನ್ನಡ ವರ್ಣಮಾಲೆಯ ಬಗ್ಗೆ ತಿಳಿದುಕೊಂಡ ನಂತರ ಕಲಿಯಬೇಕಾದ ಲಿಪಿ ರಚನೆಯ ಪ್ರಮುಖ ಭಾಗವೆಂದರೆ ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳದ್ದು. ಇವುಗಳ ಬಗ್ಗೆ ವಿವರವಾಗಿ ತಿಳಿಯೋಣ. ನೀವು ಕಾಗುಣಿತ ಎಂಬ ಪದವನ್ನು ಕೇಳಿದ್ದೀರಿ. ವರ್ಣಮಾಲೆಯಲ್ಲಿ ಕ್ ಇಂದ ಳ್ ವರೆಗಿನ 34 ಅಕ್ಷರಗಳಿಗೆ ಬೇರೆಬೇರೆ ಸ್ವರಗಳನ್ನು ಸೇರಿಸಿ ಬೇರೆಬೇರೆ ಅಕ್ಷರಗಳನ್ನು ಪಡೆಯಬಹುದು. ಈ ಪ್ರಕ್ರಿಯೆ ಕ್ ಅಕ್ಷರದಿಂದ ಆರಂಭವಾಗುವುದರಿಂದ ಇವುಗಳಿಗೆ ಕಾಗುಣಿತ ಎಂಬ ಹೆಸರು ಬಂದಿದೆ. ಇದನ್ನು ಅನೇಕ ಕಡೆ 'ಬಳ್ಳಿ' ಎಂದೂ ಕರೆಯುತ್ತಾರೆ. ಇದು ಸೂಕ್ತವೂ ಹೌದು. ಏಕೆಂದರೆ ಕ್ ಇಂದ ಳ್ ವರೆಗಿನ 34 ಅಕ್ಷರಗಳಿಗೆ ವಿವಿಧ ಸ್ವರಗಳನ್ನು ಸೇರಿಸುತ್ತಾ ಹೋದಂತೆ ಅಕ್ಷರಗಳ ಸಂಖ್ಯೆ ಬಳ್ಳಿಯಂತೆ ಬೆಳೆಯುತ್ತಾ ಹೋಗುತ್ತದೆ. ಇವನ್ನೇ ಗುಣಿತಾಕ್ಷರವೆಂದು ಹೇಳಲಾಗುತ್ತದೆ. |
|