1.

Write an essay on onam in kannada

Answer»

EXPLANATION:

ಓಣಮ್ ‌ ದಕ್ಷಿಣ ಭಾರತದ ಕೇರಳರಾಜ್ಯದಲ್ಲಿ ನಡೆಯುವ ಅತಿದೊಡ್ಡ ಹಬ್ಬವಾಗಿದೆ. ಈ ಹಬ್ಬವನ್ನು ಮಲಯಾಳೀ ಪಂಚಾಂಗದ ಮೊದಲ ತಿಂಗಳು ಚಿಂಗಮ್(ಆಗಸ್ಟ್-ಸೆಪ್ಟೆಂಬರ್) ತಿಂಗಳಿನಲ್ಲಿ, ಪುರಾಣಪ್ರಸಿದ್ಧ ಸಾಮ್ರಾಟ ಮಹಾಬಲಿಯು ಮನೆಗೆ ಮರಳಿ ಬಂದ ಕುರುಹಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಹತ್ತು ದಿನಗಳವರೆಗೆ ಸಡಗರದಿಂದ ಜರುಗುವ ಈ ಹಬ್ಬವು ಕೇರಳದ ಹಲವಾರು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದೆ. ತುಂಬಾ ಕ್ಲಿಷ್ಟ ವಿನ್ಯಾಸದ ಪುಷ್ಪ ಚಿತ್ತಾರಗಳು, ಬಗೆ ಬಗೆಯ ಭಕ್ಷ್ಯಗಳು, ಹಾವು ದೋಣಿಯಾಟದ ಸ್ಪರ್ಧೆಗಳು, ಕೈಕೊತ್ತಿಕಲಿ ನೃತ್ಯ - ಇವೆಲ್ಲ ಈ ಉತ್ಸವದ ಪ್ರಮುಖ ಆಕರ್ಷಣೆಗಳಾಗಿವೆ. ಈ ಹಬ್ಬಕ್ಕಾಗಿ ಇಲ್ಲಿನ ಜನರು ಹೊಸಬಟ್ಟೆಗಳನ್ನು ತೊಡುವುದು ವಾಡಿಕೆ. ಪುರುಷರು ಅಂಗಿ ಮತ್ತು ಮುಂಡು ಎಂದು ಕರೆಯಲಾಗುವ ಸ್ಕರ್ಟ್ ತರದ ಉಡುಪನ್ನು(ಪಂಚೆ)ಧರಿಸಿದರೆ,ಮಹಿಳೆಯರು ಅದೇ ತರಹದ ಮುಂಡುವಿನ ಮೇಲೊಂದು ಚಿನ್ನದ ಬಣ್ಣದ ನರಿಯತ್ತು ಎಂದು ಕರೆಯಲಾಗುವ ಮೇಲಂಗಿಯನ್ನು ತೊಟ್ಟು ಸಂಭ್ರಮಿಸುತ್ತಾರೆ. ಬಾಲಕಿಯರು ಪಾವಡ ವೆಂಬ ಲಂಗ, ಮೇಲೊಂದು ರವಿಕೆಯನ್ನು ತೊಟ್ಟು ಸಡಗರದಿಂದ ಓಡಾಡುತ್ತಿರುತ್ತಾರೆ. ಓಣಂ ಕೇರಳದ ಸುಗ್ಗಿಯ ಹಬ್ಬವೂ ಹೌದು.[ಸೂಕ್ತ ಉಲ್ಲೇಖನ ಬೇಕು]



Discussion

No Comment Found