1.

Write essay on prajaprabhutva in kannada language​

Answer» N ⤵️write ESSAY on PRAJAPRABHUTVA in KANNADA languageAnswer⤵️ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ (ಡೆಮಾಕ್ರಸಿ). ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ. ಹಾಗೂ ಪ್ರಜಾ ಪ್ರಭುತ್ವವನ್ನು ಅಬ್ರಹಾಂ ಲಿಂಕನ್ ರವರು ಹೇಳಿರುವಂತೆ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಸರಕಾರವೇ ಪ್ರಜಾಪ್ರಭುತ್ವ.ಪುರಾತನ ಕಾಲದಲ್ಲಿ ಗ್ರೀಕ್ ನಗರ ರಾಜ್ಯವಾದ ಆತೆನ್ಸ್‌ನಲ್ಲಿ ಪ್ರತ್ಯಕ್ಷ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿತ್ತು. ಅಲ್ಲದೆ, ಪ್ರಾಚೀನ ಭಾರತದಲ್ಲಿದ್ದ ಗಣರಾಜ್ಯಗಳ ಬಗ್ಗೆ ಸಾಕಷ್ಟು ಸಂಶೋಧನೆಯಾಗಿದೆ. ಇತರ ಕೆಲವು ದೇಶಗಳಲ್ಲೂ ಇಂಥ ಪ್ರಜಾಪ್ರಭುತ್ವವಿದ್ದುದನ್ನು ಕಾಣಬಹುದಾಗಿದೆ.ಪ್ರಜಾಪ್ರಭುತ್ವವೆಂಬ ಪದಕ್ಕೆ ಒಂದು ನಿರ್ದಿಷ್ಟ ಅರ್ಥ ಕೊಡಲು ಸಾಧ್ಯವಿಲ್ಲ. ಸರ್ಕಾರದ ಸ್ವರೂಪವನ್ನು ಮತ್ತು ಸಾಮಾಜಿಕ ಜೀವನವನ್ನು ರೂಪುಗೊಳಿಸುವ ಒಂದು ಸಿದ್ಧಾಂತವನ್ನು ಅಥವಾ ವ್ಯವಸ್ಥೆಯನ್ನು ಪ್ರಜಾಪ್ರಭುತ್ವವೆಂದು ಕರೆಯಲಾಗಿದೆ. ಚುನಾವಣೆಯುಳ್ಳ ಸಮಾಜದಲ್ಲೂ ಸರ್ಕಾರ ಮತ್ತು ಪ್ರಜೆಗಳಿಗಿರುವ ನಿಕಟ ಸಂಬಂಧ ಮತ್ತು ಬಾಂಧವ್ಯದಲ್ಲೂ ಪ್ರಜೆಗಳ ಸಮಾನತೆಯಲ್ಲೂ ಸಂಪತ್ತು, ಮತ, ಹುಟ್ಟು ಬಾಳುವಿಕೆಗಳ ಆಧಾರದ ಮೇಲೆ ನಿಶ್ಚಯಿಸಲ್ಪಟ್ಟು ವ್ಯಕ್ತಿ ಮತ್ತು ಪ್ರಜಾವರ್ಗಗಳ ಹಕ್ಕುಗಳ ನಿರೂಪಣೆ ಮತ್ತು ವಿಮರ್ಶೆಯಲ್ಲೂ ಪ್ರಜಾಪ್ರಭುತ್ವದ ತತ್ವಗಳು ಮಾರ್ಪಾಡಾಗಿವೆ. ಒಂದು ವಿಶಿಷ್ಟ ಪರಿಸ್ಥಿತಿಯಲ್ಲಿ ಒಂದು ವರ್ಗಕ್ಕೆ ಪ್ರಜಾಪ್ರಭುತ್ವವೆಂದು ತೋರಿದ್ದು ಮತ್ತೊಂದು ವರ್ಗಕ್ಕೆ ಸ್ವಚ್ಛಂದ ಪ್ರಭುತ್ವವಾಗಿ ಗೋಚರವಾಗಿದೆ. ಇದು ವ್ಯಕ್ತಿಯ ಜೀವನದಲ್ಲೂ ಸಮಾಜದ ಜೀವನದಲ್ಲೂ ಅವನವನ ಮತ್ತು ಆಯಾ ವರ್ಗದ ಅಂತಸ್ತಿಗೆ ಅನುರೂಪವಾಗಿ ಅರ್ಥ ತಳೆದಿದೆ.ಪ್ರಜಾಪ್ರಭುತ್ವ ಸರ್ಕಾರದ ರಚನೆಯ ಪ್ರಶ್ನೆ ಮೊಟ್ಟಮೊದಲು ಉದ್ಭವವಾದದ್ದು 19ನೆಯ ಶತಮಾನದಲ್ಲಿ. 18ನೆಯ ಶತಮಾನದವರೆಗೆ ಇದರ ಪೂರ್ಣ ಪರಿಕಲ್ಪನೆಯಾಗಿರಲಿಲ್ಲ. ಸಾಮಾಜಿಕ ಜೀವನದಲ್ಲೂ ರಾಜಕೀಯ ಜೀವನದಲ್ಲೂ ಸಮಾನತೆಗಾಗಿ ಕಾರ್ಖಾನೆಗಳ ಮಾಲಿಕರಿಗೂ ಕಾರ್ಮಿಕರಿಗೂ ಘರ್ಷಣೆ ಮೊದಲಾಗಿ, ಸಮಾನತೆಯನ್ನು ಪ್ರಜಾಪ್ರಭುತ್ವದ ತತ್ವವಾಗಿ ಪರಿಗಣಿಸಲಾದ್ದು 18ನೆಯ ಶತಮಾನದಿಂದ ಈಚೆಗೆ. ಆ ಕಾಲದಲ್ಲಿ ಪ್ರಜಾಪ್ರಭುತ್ವ ಪ್ರಚಲಿತವಾಗಿರಲಿಲ್ಲ. ಆಧುನಿಕ ಕಾಲದವರೆಗೆ ಪ್ರಚಲಿತವಾಗಿದ್ದ ಪ್ರಮುಖ ರಾಜ್ಯ ಪದ್ಧತಿ ಎಂದರೆ ಅರಸೊತ್ತಿಗೆ. ಆದರೆ, ಇಂದಿನ ಪರಿಸ್ಥಿತಿಯೇ ಬೇರೆ. ಹದಿನಾರನೆಯ ಶತಮಾನದಿಂದೀಚೆಗೆ ಅರಸೊತ್ತಿಗೆ ಕ್ಷೀಣಿಸುತ್ತ ಬಂದಿದೆ. ಈಗ ಪ್ರಜಾಪ್ರಭುತ್ವದ ತತ್ವಗಳು, ಆದರ್ಶಗಳು ಆಳವಾಗಿ ಬೇರೂರಿಕೊಂಡಿವೆ. ಪ್ರಪಂಚದ ಕೆಲವು ಭಾಗಗಳನ್ನು ಬಿಟ್ಟರೆ ಎಲ್ಲೆಡೆಯಲ್ಲೂ ಸರ್ಕಾರಗಳನ್ನು ಪ್ರಜಾಪ್ರಭುತ್ವದ ಕೆಲವು ತತ್ವಗಳಿಗೆ ಅನುಕೂಲವಾಗಿ ರಚಿಸಲಾಗಿದೆ. ಅವುಗಳ ಸ್ವರೂಪದಲ್ಲಿ ಭಿನ್ನತೆಗಳಿದ್ದರೂ, ಕೆಲವು ತತ್ವಗಳೂ ಆಚರಣೆಗಳೂ ವಿವಾದಾಸ್ಪದವಾಗಿದ್ದರೂ ಪ್ರಜಾಪ್ರಭುತ್ವ ಪದ್ಧತಿಗೆ ಬಹುತೇಕ ಎಲ್ಲರೂ ನಿಷ್ಠೆ ತೋರಿಸುತ್ತಾರೆ


Discussion

No Comment Found